ಮಂಗಳೂರು,ಆ.2: ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಬದುಕು, ತ್ಯಾಗ ಮತ್ತು ಸಮಾಜಮುಖಿ ಸೇವೆಯ ಕುರಿತಾದ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದಿರುವ ‘ತ್ಯಾಗಮಯಿ ಮೊಳಹಳ್ಳಿ’ಕೃತಿ ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಇಂದು ಬ್ಯಾಂಕ್ ನ ಸಭಾಂಗಣದಲ್ಲಿ ಬಿಡುಗಡೆ ಗೊಳಿಸಿದರು.
ಬಳಿಕ ಮಾತನಾಡಿದ ಡಾ.ರಾಜೇಂದ್ರ ಕುಮಾರ್ ಅವರು, ಬ್ಯಾಂಕಿನ ಪ್ರಧಾನ ಕಚೇರಿಯ ಸಿಬ್ಬಂದಿಯಾಗಿರುವ ಎಸ್. ಜಗದೀಶ್ಚಂದ್ರ ಅಂಚನ್ ಅವರು ಈ ಕೃತಿಯನ್ನು ರಚಿಸಿದ್ದಾರೆ. ಮೊಳಹಳ್ಳಿ ಶಿವರಾವ್ ಅವರು ಕುಂದಾಪುರದ ಮೊಳಹಳ್ಳಿಯಲ್ಲಿ ಜನಿಸಿ, ಪುತ್ತೂರಿನಲ್ಲಿ ವಕೀಲ ವೃತ್ತಿ ನಡೆಸುತ್ತಲೇ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಜೀವನಗಾಥೆ ಇಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಲಿ ಎಂಬ ನಿಟ್ಟಿನಲ್ಲಿ ಈ ಕೃತಿಯನ್ನು ರಚಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ನಿರ್ದೇಶಕ ಶಶಿಕುಮಾರ್ ರೈ ಬಾಳ್ಯೊಟ್ಟು, ನಬಾರ್ಡ್ನ ಜಿಎಂ ಸಂಗೀತ, ಅಶೋಕ್ ಕುಮಾರ್ ಶೆಟ್ಟಿ, ರಮೇಶ್, ಸುಧೀರ್ ಕುಮಾರ್, ಜಗದೀಶ್ಚಂದ್ರ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.











