ಮಂಗಳೂರು,ಆ.04 : ಗೋಲ್ಡನ್ ಮೂವೀಸ್ ಬ್ಯಾನರ್‌ನಲ್ಲಿ ತಯಾರಾದ ಸಂದೀಪ್ ಬೆದ್ರ ನಿರ್ದೇಶನದ ‘ಪಿಕ್ಚರ್‘ಚಲನಚಿತ್ರವು ಆಗಸ್ಟ್ 7ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಮಿಡಿ, ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಿತ್ಯಪ್ರಕಾಶ್ ಬಂಟ್ವಾಳ್ ನಾಯಕನಟರಾಗಿ ನಟಿಸಿದ್ದಾರೆ. ನಾಯಕಿ ನಟಿಯಾಗಿ ಅಮೃತ ಸುದು ಅಭಿನಯಿಸಿದ್ದಾರೆ ಎಂದು ಹೇಳಿದರು.
ಚಿತ್ರದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ.ಪಡೀಲ್, ಅರವಿಂದ್ ಬೋಳಾರ್, ಸಾಯಿಕೃಷ್ಣ ಭೋಜರಾಜ್ ವಾಮಂಜೂರ್, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್ ಮುಂತಾದವರು ನಟಿಸಿದ್ದಾರೆ ಎಂದರು.
ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, ಗೋಲ್ಡನ್ ಮೂವೀಸ್ ಬ್ಯಾನರ್‌ನಲ್ಲಿ ‘ಪಿಕ್ಚರ್’ ಚಲನಚಿತ್ರ ನಿರ್ಮಾಣವಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಶಿಲ್ಪಾ ಗಣೇಶ್ ಅವರೂ ಜಸ್ಕರಣ್ ಸಿಂಗ್ ಜೊತೆಗೂಡಿ ‘ಗೋಕುಲದ ರಾಧೆ’ ಎಂಬ ಹಾಡನ್ನು ಹಾಡಿದ್ದಾರೆ. ಚಿತ್ರದಲ್ಲಿ ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಛಾಯಾಚಿತ್ರಗ್ರಹಣ, ರಾಜು ಆರ್ಯನ್ ಸಂಕಲನ, ಧನಂಜಯ್ ಬಿ. ಶ್ರೀ ರಾಜು ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಚಿತ್ರಕ್ಕಿದೆ. ಸ್ಯಾಮುಯೆಲ್ ಅಭಿ ಸಂಗೀತವಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ನಾಯಕ ನಟ ನಿತ್ಯಪ್ರಕಾಶ್ ಬಂಟ್ವಾಳ್, ನಾಯಕಿ ನಟಿ ಅಮೃತಾ, ನಟ ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು, ಅರ್ಜುನ್ ಕಾಪಿಕಾಡ್, ಸ್ಯಾಮ್ಯುಯೆಲ್ ಅಬಿ, ಸಚಿನ್ ಉಪ್ಪಿನಂಗಡಿ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.











