ಉಡುಪಿ, ಆ. 08 : ಮುದರಂಗಡಿಯ ಉದ್ಯಮಿ ಹಾಗೂ ಮುದರಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಡೇವಿಡ್ ಡಿ’ಸೋಜಾ ಅವರನ್ನು ಶುಕ್ರವಾರ ಮಧ್ಯಾಹ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಈ ಘಟನೆ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಲಾರ್ ಗ್ರಾಮದ ಸೇಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಮುಂಭಾಗದಲ್ಲಿ ನಡೆದಿದೆ.ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣವೇ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ವರದಿ ಪ್ರಕಾರ, ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಅವರ ಕಚೇರಿಯ ಬಳಿ ಆ. 07 ರಂದು ಮಧ್ಯಾಹ್ನ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಡೇವಿಡ್ ಡಿಸೋಜಾರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ, ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನಪ್ಪಿದ್ದಾರೆ.ಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ.
ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.











