ಬೆಳ್ತಂಗಡಿ, ಆ. 11 : ಧರ್ಮಸ್ಥಳ-ಉಜಿರೆ ಮುಖ್ಯ ರಸ್ತೆಯ ನೀರಚಿಲುಮೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಮೃತನನ್ನು ಮಡಂತ್ಯಾರ್ನ ಪಾರೆಂಕಿ ಪಾಂಗಲ್ ನಿವಾಸಿ ಸನತ್ (30) ಎಂದು ಗುರುತಿಸಲಾಗಿದೆ.
ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











