ಬಂಟ್ವಾಳ, ಆ. 12 : ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ.
ಖಾಸಗಿ ಶಾಲೆಗೆ ಸೇರಿದ ಬಸ್ಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ವೇಳೆ ಕುಂಟುಕುಡೇಲು ಇಳಿಜಾರಿನ ರಸ್ತೆಯಲ್ಲಿ ಯಾಂತ್ರಿಕ ದೋಷದಿಂದ ನೇರವಾಗಿ ಕೆಳಗಡೆ ಚಲಿಸಿ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಬಸ್ಸಿನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಅಪಾಯದಿಂದ ಪಾರಾಗಿದ್ದಾರೆ.











