ಬೆಂಗಳೂರು, ಆ. 13 : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಬುಧವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಅಧಿಕೃತ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕಿದ್ದಾರೆ.
ರಾಮಲಿಂಗಾರೆಡ್ಡಿ-ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ, ಲಕ್ಷ್ಮಣ ಸವದಿ-ಸಹಕಾರ, ರುದ್ರಪ್ಪ ಲಮಾಣಿ-ಸಕ್ಕರೆ ಮತ್ತು ಜವಳಿ, ಬಿ.ಝಡ್.ಝಮೀರ್ ಅಹ್ಮದ್ ಖಾನ್-ವಸತಿ, ಕೆ.ಎಚ್.ಮುನಿಯಪ್ಪ-ಸಮಾಜ ಕಲ್ಯಾಣ, ಶಿವರಾಜ್ ತಂಗಡಗಿ-ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ, ಯು.ಟಿ. ಖಾದರ್-ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಡಾ.ಅಜಯ್ ಸಿಂಗ್-ಸಣ್ಣ ನೀರಾವರಿ, ಟಿ.ರಘುಮೂರ್ತಿ-ಪರಿಶಿಷ್ಟ ಪಂಗಡ(ಎಸ್ಟಿ ) ಕಲ್ಯಾಣ, ವಿಜ್ಞಾನ ಮತ್ತು ತಂತ್ರಜ್ಞಾನ, ಚಲುವರಾಯಸ್ವಾಮಿ-ಜಲಸಂಪನ್ಮೂಲ, ಮಧು ಬಂಗಾರಪ್ಪ-ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಸವರಾಜ ರಾಯರೆಡ್ಡಿ-ಉನ್ನತ ಶಿಕ್ಷಣ.
ಶಿವಲಿಂಗೇಗೌಡ-ಅಬಕಾರಿ,ಪುಟ್ಟರಂಗಶೆಟ್ಟಿ-ಪಶುಸಂಗೋಪನೆ ಮತ್ತು ರೇಶ್ಮೆ, ವಿಜಯಾನಂದ ಕಾಶಪ್ಪನವರ್-ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳು, ಕೆ.ಎಸ್.ಬಸವಂತಪ್ಪ- ಮುಜುರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ. ಎಸ್.ಎಸ್. ಮಲ್ಲಿಕಾರ್ಜುನ್-ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಸಂತೋಷ್ ಲಾಡ್-ಕಾರ್ಮಿಕ, ರಿಝ್ವಾನ್ ಅರ್ಶದ್-ಆಹಾರ ಮತ್ತು ನಾಗರಿಕ ಸರಬರಾಜು, ಪಿ.ಎಂ.ನರೇಂದ್ರ ಸ್ವಾಮಿ-ಕೃಷಿ, ಎಚ್.ಸಿ.ಬಾಲಕೃಷ್ಣ-ಪೌರಾಡಳಿತ ಹಾಗೂ ಬಿ. ನಾಗೇಂದ್ರ ಅವರಿಗೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜವಾಬ್ದಾರಿಯನ್ನು ವಹಿಸಲಾಗಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿ ಹಣಕಾಸು, ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ಕಾನೂನು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ, ಕೃಷಿ ಮಾರುಕಟ್ಟೆ ನಗರ ಹಾಗೂ ಗ್ರಾಮಾಂತರ ಯೋಜನಾ ಆಯುಕ್ತಾಲಯ, ಬಿಡಿಎ ಮತ್ತು ಬಿಎಂಆಡ್ಡಿಎ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಹಂಚಿಕೆಯಾಗದ ಎಲ್ಲ ಖಾತೆಗಳು ಇವೆ.
ಇಬ್ಬರು ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಹಿರಿಯ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಕೆ.ಎಚ್. ಮುನಿಯಪ್ಪ ಅವರ ಖಾತೆಗಳನ್ನು ಬದಲಾವಣೆ ಮಾಡಲಾಗಿದೆ. ಜಲಸಂಪನ್ಮೂಲ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದ ಕೆ.ಎಚ್.ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆಯ ಜವಾಬ್ದಾರಿಯನ್ನು ವಹಿಸಲಾಗಿದೆ.











