ಮಂಗಳೂರು, ಆ. 15: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ ಆಗಸ್ಟ್ 15, ಶನಿವಾರ 80ನೇ ಸ್ವಾತಂತ್ರ್ಯೋ ತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ಪರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು.
ನಂತರ ಅವರು ಸ್ವಾತಂತ್ರ್ಯೋ ತ್ಸವದ ಸಂದೇಶದಲ್ಲಿ, ದೇಶದ ಏಕತೆ, ಸೌಹಾರ್ದತೆ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಬೇಕು. ಯುವಜನತೆ ದೇಶಭಕ್ತಿಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬಲಿಷ್ಠ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದರು.
ಭಾರತವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ನಾಗರಿಕರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಹಾಗೂ ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಜಿಲ್ಲೆಯಲ್ಲಾಗಿರುವ ಸುಧಾರಣೆಗಳ ಬಗ್ಗೆ ಮಾತಾಡಿದರು.
ಭಾರತವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ನಾಗರಿಕರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಸ್ವಾತಂತ್ರ್ಯಗ ಹೋರಾಟಗಾರರಿಗೆ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಎಸ್.ಎಲ್ ಭೋಜೇಗೌಡ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೇರಿದಂತೆ ಜನಪ್ರತಿನಿಧಿಗಳು, ನಿಗಮಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.











