ಮಂಗಳೂರು, ಆ. 17 : ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಬೋಳೂರಿನ ಸುಲ್ತಾನ್ ಬತ್ತೇರಿ ಬಳಿಯ ಸ್ವಸ್ತಿಕ್ ರಿವರ್ ಫ್ರಂಟ್ ನಲ್ಲಿ “ಆಟಿದ ಐಸಿರ” ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಗಣ್ಯರು ಕಂಬಳದ ಕೋಣಗಳಿಗೆ ಹಿಂಡಿ ಅವಲಕ್ಕಿ ಸಮರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ಇತರ ಗಣ್ಯರೋಂದಿಗೆ ಸೇರಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಹಿಂದಿನ ಕಾಲದಲ್ಲಿ ಆಟಿದ ದಿನಗಳು ಒಂದು ಹೊತ್ತಿನ ಊಟಕ್ಕೂ ಕಷ್ಟಕರವಾಗಿದ್ದವು. ಅಂದಿನ ಆ ದಿನಗಳನ್ನು ನೆನಪಿಸುವುದರಕೋಸ್ಕರ ಆಟಿ ದಿನವನ್ನು ಆಚರಿಸುತ್ತಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ಈ ತುಳುನಾಡಿನಲ್ಲಿ ಜುಲೈ-ಆಗಸ್ಟ್ ನಲ್ಲಿ ಆಟಿ ದಿನವನ್ನು ಆಚರಿಸುತ್ತಾರೆ.ನಮ್ಮ ಹಿರಿಯರು ಆಟಿಯ ಕಾಲದಲ್ಲಿ ಒಂದು ಹೊತ್ತಿನ ಊಟಕ್ಕೂ ಕಷ್ಟ ಪಟ್ಟು, ಪ್ರಕೃತಿದತ್ತವಾಗಿ ಸಿಗುವ ಆಹಾರ ಪದಾರ್ಥಗಳನ್ನೇ ಬಳಸಿಕೊಂಡು ಹೇಗೆ ಬದುಕಿದರು ಎಂಬುದನ್ನು ಅರಿಯುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.
ಕಾರ್ಯಕ್ರಮದಲ್ಲಿ ತುಳುನಾಡ ಜನಪದ ಕ್ರೀಡೆಗಳಾದ ಕೋಳಿ ಅಂಕ, ತೆಂಗಿನ ಕಾಯಿ ಕಟ್ಟುವುದು, ಮುಂತಾದ ಗ್ರಾಮೀಣ ಸೊಗಡಿನ ಕ್ರೀಡೆಗಳು ನಡೆದವು. ಹುಲಿವೇಷ ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು .
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಮಂಡಲದ ಪ್ರಭಾರಿ ತಿಲಕ್ ರಾಜ್ ಕೃಷ್ಣಾಪುರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ರಾಜ್ ಗೋಪಾಲ್ ರೈ, ಗುರು ಚರಣ್, ನಾರಾಯಣ ಗಟ್ಟಿ, ನಿಕಟ ಪೂರ್ವ ಪಾಲಿಕೆ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರ ಸಹಿತ ಅನೇಕರು ಉಪಸ್ಥಿತರಿದ್ದರು.











