ಕೋಲ್ಕತ್ತಾ, ದುಬೈ,ಆ. 19 : ಇಲ್ಲಿನ ಹೋಟೆಲ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇದರ ಪರಿಣಾಮ ಮಗು ಸೇರಿ ಕನಿಷ್ಠ 9 ಮಂದಿ ಸಾವನಪ್ಪಿರುವ ಘಟನೆ ಬುಧವಾರ ನಡೆದಿದೆ.
ವರದಿ ಪ್ರಕಾರ,ನಗರದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಮುಂಜಾನೆ ಸುಮಾರು 2 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಹೋಟೆಲ್‌ನಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಸುಮಾರು 80 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮೃತರಲ್ಲಿ ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಪ್ರಜೆಗಳು ಹಾಗೂ ಜಾರ್ಖಂಡ್ ನಿವಾಸಿಯೊಬ್ಬರು ಸೇರಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಏರ್‌ಕಂಡೀಷನರ್‌ನಲ್ಲಿ ಉಂಟಾದ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.










