ಮಂಗಳೂರು, ಆ.21 : ಲೋಕಕಲ್ಯಾಣ, ಸಮೃದ್ಧಿ, ಶಾಂತಿ ಹಾಗೂ ಸರ್ವಜನ ಕ್ಷೇಮದ ಸಂಕಲ್ಪದೊಂದಿಗೆ ಜಗದಾಚಾರ್ಯ ಸ್ವಾಮಿ ಅಖಿಲೇಶ್‌ಜೀ ಮಹಾರಾಜ್ ಸೇವಾ ಸಂಸ್ಥಾನ ಹಾಗೂ ದಿ ಸ್ಯಾಫ್ರನ್ ಫ್ರಂಟ್ ಸಹಯೋಗದಲ್ಲಿ ಶ್ರೀಮದ್ ಲಕ್ಷ್ಮೀನಾರಾಯಣ ಮಹಾಯಾಗವನ್ನು ಆಗಸ್ಟ್ 24ರಿಂದ 28ರವರೆಗೆ ಶ್ರೀ ಯೋಗೇಶ್ವರ ಕದ್ರಿ ಮಠದಲ್ಲಿ ಮಹಾಯಾಗ ನಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿದೆ ಎಂದು ಕಾರ್ಯಾಧ್ಯಕ್ಷ ದಿನಕರ ಶೆಟ್ಟಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಚಾರ್ಯ ಶ್ರೀ ಲವಕುಶ್ ಮಿಶ್ರಾಜೀ ಅವರ ಪೌರೋಹಿತ್ಯದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು ನಡೆಯಲಿವೆ. ಜಾತಿ-ಭೇದವಿಲ್ಲದೆ ಎಲ್ಲ ವರ್ಗದ ಜನರು ಭಾಗವಹಿಸುವ ಮೂಲಕ ಕುಟುಂಬ ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದ ಮತ್ತು ಸಮೃದ್ಧಿ ನೆಲೆಸುವುದು ಮಹಾಯಾಗದ ಉದ್ದೇಶವಾಗಿದೆ ಎಂದರು.
ಆಗಸ್ಟ್ 24ರಂದು ಬೆಳಗ್ಗೆ 8 ಗಂಟೆಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಿಂದ ಶ್ರೀ ಯೋಗೇಶ್ವರ ಕದ್ರಿ ಮಠದವರೆಗೆ ಕಳಶಯಾತ್ರೆ ನಡೆಯಲಿದೆ. ಐದು ದಿನಗಳ ಕಾಲ ಹೋಮ-ಹವನ, ಮಂತ್ರಪಠಣ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಆಗಸ್ಟ್ 28ರಂದು ಪೂರ್ಣಾಹುತಿ ನೆರವೇರಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಆಯೋಜನ ಸಮಿತಿಯ ಪ್ರಮುಖರಾದ ಕಿರಣ್ ಕುಮಾರ್ ಜೋಗಿ, ರಾಜೇಶ್ ಪವಿತ್ರನ್, ಎಲ್.ಕೆ. ಸುವರ್ಣ, ರಾಘವೇಂದ್ರ ರಾವ್,ಜನಾರ್ಧನ ಹಾಗೂ ಕಮಲೇಶ ಸುವರ್ಣ ಉಪಸ್ಥಿತರಿದ್ದರು.











