ಮಂಗಳೂರು, ಸೆ.05: ಮಂಗಳೂರಿನ ಕಲಾಸಾಧನ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಸೆ.6ರಂದು ಸಂಜೆ 5ಗಂಟೆಗೆ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದ ಸಂಭ್ರಮ ‘ರಾಗ ಸುಧಾ’ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕಿ ವಿಭಾ ನಾಯಕ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು ಈ ಸಂಗೀತ ಸಂಭ್ರಮದಲ್ಲಿ ಗ್ವಾಲಿಯರ್ ಘರಾನಾ ಕಲಾಕಾರ ಡಾ. ಪಂಡಿತ್ ರಾಮ್ ದೇಶಪಾಂಡೆ ಅವರ ಹಿರಿಯ ಶಿಷ್ಯ ಖ್ಯಾತ ಹಿಂದೂಸ್ತಾನಿ ಗಾಯಕರಾದ ಆದಿತ್ಯ ಮೋದಕ್, ಗ್ಯಾಲಿಯರ್ ಕಿರಾಣಾ ಪದ್ಧತಿಯ ಗಾಯಕ ಮತ್ತು ಹಾರ್ಮೋನಿಯಂ ವಾದಕ ಸತೀಶ್ ಭಟ್ ಹೆಗ್ಯಾರ್,ಪಂಡಿತ್ ಮಾಣಿಕ್ ರಾವ್ ಅವರ ಶಿಷ್ಯ,ತಬಲಾ ವಾದಕ ಮತ್ತು ಗಾಯಕ ಅಕ್ಷಯ ಜೋಶಿ ಭಾಗವಹಿಸಲಿದ್ದಾರೆ ಎಂದರು.
ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಮಾತಾಡಿ ಅವರು ಮಾತಾಡಿ, ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಬಳಿಕ ಗಣ್ಯರು ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಹೇಳಿದರು.









