ಮಂಗಳೂರು, ಸೆ.10 : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಿ ಎಐಸಿಸಿ ಬುಧವಾರ ಆದೇಶ ಹೊರಡಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಸಂಘಟನ್ ಸೃಜನ್ ಅಭಿಯಾನದ ಭಾಗವಾಗಿ ಈ ನೇಮಕಾತಿ ನಡೆದಿದೆ.
ಈ ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಪಕ್ಷದ ಪದಾಧಿಕಾರಿಗಳು ಚರ್ಚೆ ನಡೆಸಿ, ಸಂಘಟನೆಯ ಕುರಿತು ಸಮಗ್ರ ವರದಿ ಸಲ್ಲಿಸಿದ್ದರು.
ಬಳಿಕ ಎಐಸಿಸಿ ವೀಕ್ಷಕರು ಹಾಗೂ ಹಿರಿಯ ನಾಯಕರ ಚರ್ಚೆಯ ಆಧಾರದಲ್ಲಿ ದ. ಕ.ನೂತನ ಜಿಲ್ಲಾ ಅಧ್ಯಕ್ಷ ರಾಗಿ ಪದ್ಮರಾಜ್ ಆರ್.ಪೂಜಾರಿ ಅವರನ್ನು ನೇಮಕ ಮಾಡಲು ಅನುಮೋದನೆ ನೀಡಲಾಗಿದೆ.











