ಮಂಗಳೂರು, ಸೆ.14 : ಬಂಟರ ಯಾನೆ ನಾಡವರ ಮಾತೃಸಂಘ, ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರನಗರ ಬಂಟ್ಸ್ ಹಾಸ್ಟೇಲ್ ನಲ್ಲಿ ನಡೆಯುವ 20 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ ಅವರ ನೇತೃತ್ವದಲ್ಲಿ, ಬಾಲಾಂಭಟ್ ದೇವಸ್ಥಾನದ ಹಿರಿಯ ಅರ್ಚಕರಾದ ಗಿರಿಧರ್ ಭಟ್ ಅವರ ಮಾರ್ಗದರ್ಶನದಲ್ಲಿ ಶರವು ದೇವಸ್ಥಾನದ ಬಳಿ ಇರುವ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಶ್ರೀ ಸಿದ್ದಿ ವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರಕ್ಕೆ ತರಲಾಯಿತು..
ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಪ್ರತಿಷ್ಠಾನದ ಟ್ರಸ್ಟಿಗಳಾದ ಮಂಜುನಾಥ ಭಂಡಾರಿ ಶೆಡ್ಯೆ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೆ ಬಾಲಕೃಷ್ಣ ಶೆಟ್ಟಿ ಬೆಳ್ಳಿಬೆಟ್ಟುಗುತ್ತು, ಕೃಷ್ಣಪ್ರಸಾದ್ ರೈ ಬೆಳ್ಳಿಪಾಡಿ, ಡಾ ಆಶಾಜ್ಯೋತಿ ರೈ ಬಂಬ್ರಾಣ, ಬಂಟರ ಮಾತೃ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಪುಂಚಮೆ, ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಸಂಚಾಲಕ ದಿವಾಕರ ಸಾಮಾನಿ ಚೇಳಾರ್ ಗುತ್ತು, ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ, ಹಾಗೂ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ಸಮನ್ವಯಕಾರರು ಉಪಸ್ಥಿತರಿದ್ದರು.
ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ವಿವಿಧ ಬಂಟರ ಸಂಘಗಳಿಂದ ಬಂದ ಹೊರೆಕಾಣಿಕೆಗಳನ್ನು ಹೊರೆಕಾಣಿಕೆ ಸಮಿತಿಯ ಸಂಚಾಲಕ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ಮತ್ತು ಸಹ ಸಂಚಾಲಕ ಹರೀಶ್ ಶೆಟ್ಟಿ ಬಜಪೆ ಸ್ವೀಕರಿಸಿದರು.











