ಮಂಗಳೂರು, ಸೆ.16 : ಪಂಚರಂಗಿ ಬ್ಯಾನರ್ ಅಡಿಯಲ್ಲಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ಅವರ ನಿರ್ಮಾಣದ ‘ಅಮರ್ಥ’ ಕನ್ನಡ ಚಿತ್ರ ಸೆ.18ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಗುರು ಹೆಗ್ಡೆ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ಮೇಘನಾ ರಾಜ್ ಸರ್ಜಾ ಹಾಗೂ ಗುರು ಹೆಗ್ಡೆ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಂ ಅವರು ನಿರ್ದೇಶನವನ್ನು ಮಾಡಿದ್ದಾರೆ. ಶಿರ್ವ ಸೇರಿದಂತೆ ಕರಾವಳಿಯ ವಿವಿಧ ಭಾಗಗಳಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ ಎಂದರು.
ಚಿತ್ರದ ನಟಿ ಮೇಘನಾ ರಾಜ್ ಸರ್ಜಾ ಮಾತನಾಡಿ, ಶ್ರೀನಗರ ಕಿಟ್ಟಿ ಅವರೊಂದಿಗೆ ಮೂರನೇ ಚಿತ್ರ ಇದಾಗಿದೆ ಎಂದು ತಿಳಿಸಿದರು. ನಟ ಶ್ರೀನಗರ ಕಿಟ್ಟಿ ಮಾತನಾಡಿ, ಗುರು ಹೆಗ್ಡೆ ಅವರು ಚಿತ್ರದಲ್ಲಿ ನಿರ್ಮಾಪಕ, ನಿರ್ದೇಶಕ, ನಟನೆ ಹಾಗೂ ಇತರ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಂಜುಭಾಷಿಣಿ ಶೆಟ್ಟಿ, ಆರಾಧನಾ ಭಟ್, ವಿನಯ್ ಪ್ರೀತಂ, ಪಿ ಎಲ್ ಅಶ್ರಿತ್ ಮತ್ತಿತ್ತರರು ಉಪಸ್ಥಿತರಿದ್ದರು.











