ಮಂಗಳೂರು, ಸೆ.19:ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಗರದ ಬಂಟ್ಸ್ ಹಾಸ್ಟೇಲ್ ನಲ್ಲಿ ಗಣೇಶೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 14ರಿಂದ 16ರವರೆಗೆ ನಡೆಯಿತು.
ಸೆ. 16ರಂದು ಬೆಳಿಗ್ಗೆ 8.30ರಿಂದ ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ ಆರಂಭಗೊಂಡು 11.00 ಗಂಟೆಗೆ ಯಾಗದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.
ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ದೀಪಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಪುಂಚಮೆ, ಉದ್ಯಮಿ ಸುಯೋಗ್ ಶೆಟ್ಟಿ, ಮಾಜಿ ಸಚಿವ ಬಿ ನಾಗರಾಜ ಶೆಟ್ಟಿ, ಡಾ ಸತ್ಯ ಕೃಷ್ಣ ಭಟ್, ರಘುರಾಮ ಭಟ್, ಪ್ರದೀಪದ ಕುಮಾರ್ ಕಲ್ಕೂರ,ವಿವಿಧ ಬಂಟರ ಸಂಘಗಳ ಪದಾಧಿಕಾರಿಗಳಾದ ರತ್ನಾಕರ್ ಶೆಟ್ಡಿ ಎಕ್ಕಾರ್, ಅಶೊಕ್ ಶೆಟ್ಟಿ ಮುಲ್ಕಿ, ಜಯರಾಮ ಬೆಳ್ತಂಗಡಿ, ಮಹಾಬಲ ಚೌಟ,ವಿಜಯ ಶೆಟ್ಟಿ ಕಾರ್ಕಳ ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವೇದಮೂರ್ತಿ ಡಾ ಸತ್ಯ ಕೃಷ್ಣ ಭಟ್ ಅವರನ್ನು ಸನ್ಮಾನಿಸಲಾಯಿತು.ಅಜಿತ್ ಕುಮಾರ್ ರೈ ಮಾಲಾಡಿ ಸ್ವಾಗತಿಸಿದರು. ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ವಂದಿಸಿದರು. ಕಿರಣ್ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.
ಉದ್ಯಮಿ ಸುಯೋಗ್ ಶೆಟ್ಟಿ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ಗಣ್ಯರ ಉಪಸ್ಥಿತಿಯಲ್ಲಿ ವಿಸರ್ಜನ ಪೂಜೆ ನಡೆಯಿತು. ನಂತರ ಶೋಭಾಯಾತ್ರೆಯು ಓಂಕಾರ ನಗರದಿಂದ ಜಿಲ್ಲೆಯ ವಿವಿಧ ಭಜನಾ ತಂಡಗಳೊಂದಿಗೆ ಬಂಟ್ಸ್ ಹಾಸ್ಟೇಲ್ ಸರ್ಕಲ್, ಪಿವಿಎಸ್ ವೃತ್ತ, ನ್ಯೂಚಿತ್ರಾ ಟಾಕೀಸ್, ರಥಬೀದಿ, ವೆಂಕಟರಮಣ ದೇವಸ್ಥಾನದ ರಸ್ತೆಯಲ್ಲಿ ಸಾಗಿ ಶ್ರೀ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.











