ನವದೆಹಲಿ, ಸೆ. 23: ಧರ್ಮಸ್ಥಳದ ಸೌಜನ್ಯ ಪ್ರಕರಣ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆ ಬಳಿಕ ಸುಪ್ರೀಂ ಕೋರ್ಟ್‌ಗೆ ವಿಶೇಷ ಮನವಿ ಸಲ್ಲಿಸಿದ್ದರು. ಸೌಜನ್ಯಾ ಅವರ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್ ಸಚ್‌ದೇವ ಅವರ ದ್ವಿ ಸದಸ್ಯ ಪೀಠವು, ಮುಂದಿನ 3 ತಿಂಗಳ ಒಳಗಾಗಿ ಪೂರ್ಣ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ.











