ಉಪ್ಪಿನಂಗಡಿ, ಸೆ.27 : ಬೈಕ್ ಹಾಗೂ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮದ ಕಜೆ ನಿವಾಸಿ ಅಣ್ಣು (52) ಎಂದು ಗುರುತಿಸಲಾಗಿದೆ.
ಅಣ್ಣು ಅವರು ಕೋಡಿಂಬಾಡಿಯ ತನ್ನ ಮನೆಯಿಂದ ಗೋಳಿತ್ತೊಟ್ಟಿನಲ್ಲಿ ನಿಧನರಾಗಿದ್ದ ಸಂಬಂಧಿಕರೊಬ್ಬರ ಮನೆಗೆ ತೆರಳಿ ವಾಪಸ್ ಮನೆಗೆ ಹಿಂತಿರುಗುತ್ತಿದ್ದಾಗ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಬೈಕ್ ಹಾಗೂ ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಅಣ್ಣು ಅವರು ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಟ್ಯಾಂಕರ್ ಲಾರಿ ಚಾಲಕ ಮಲ್ಲಪ್ಪ ಸಂಕೋನಟ್ಟಿ ನೀಡಿದ ದೂರಿನಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











