ಬಂಟ್ವಾಳ, ಸೆ.28 ಆಲ್ಟೋ ಕಾರು ಮತ್ತು ಟೆಂಪೋ ಪಿಕಪ್ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮಹಿಳೆ ಸಾವನಪ್ಪಿದ್ದು,, ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಬಂಟ್ವಾಳದ ಮಾಣಿ ಫ್ಲೈ ಓವರ್ ನಲ್ಲಿ ನಡೆದಿದೆ.
ಮೃತರನ್ನು ಮಡಿಕೇರಿ ನಿವಾಸಿ ನಬೀಶ್ ( 55)ಎಂದು ಗುರುತಿಸಲಾಗಿದೆ.
ನಾಲ್ಕು ಮಂದಿ ಮಹಿಳೆಯರು ಹಾಗೂ ಚಾಲಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಉಮ್ರಾ ತರಗತಿ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಾರು ಮತ್ತು ಟೆಂಪೋ ಪಿಕಪ್ ವಾಹನಗಳ ನಡುವೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಓರ್ವ ಮಹಿಳೆ ಸಾವನಪ್ಪಿದ್ದಾರೆ. ಗಂಭೀರ ಗಾಯಗೊಂಡ ಮೂವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.











