ಪುತ್ತೂರು, ಅ.04 : ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ಮ್ಯಾನ್ ಸಾವನ್ನಪ್ಪಿದ್ದ ಘಟನೆ ಕೆದಿಲ ಶಾಲೆಯ ಬಳಿ ಶನಿವಾರ ನಡೆದಿದೆ.
ಮೃತರನ್ನು ಕೆಮ್ಮಾಯಿ ನಿವಾಸಿ ರವಿ ಗೌಡ ಎಂದು ಗುರುತಿಸಲಾಗಿದೆ.
ರವಿ ಗೌಡ ಅವರು ಶನಿವಾರ ಕೆದಿಲ ಶಾಲೆಯ ಬಳಿ ಎಚ್ಟಿ ವಿದ್ಯುತ್ ಲೈನಿನ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಅರ್ಥ್ ಲೈನಿನ ವಿದ್ಯುತ್ ಪ್ರವಹಿಸಿದ ಪರಿಣಾಮವಾಗಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.











