ಮಂಗಳೂರು, ಅ. 26 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಪೂವರ ಕೆರೆ ರಸ್ತೆಯಿಂದ ಕಲ್ಲಗುಡ್ಡೆತನಕದ ರಸ್ತೆ ಅಭಿವೃದ್ಧಿ ಕಾಮಗಾರಿಯು ರೂ.10 ಲಕ್ಷ ವೆಚ್ಚದಲ್ಲಿ ನಡೆಯಲಿದ್ದು ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಪ್ರಮುಖರಾದ ಚಂದ್ರಶೇಖರ್ ಬಜಾಲ್ ಹಾಗೂ ಸ್ಥಳೀಯರ ಬೇಡಿಕೆಯಂತೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಎಲ್ಲರ ಸಹಕಾರದೊಂದಿಗೆ ಶೀಘ್ರದಲ್ಲಿ ಈ ಕಾರ್ಯ ಪೂರ್ಣಗೊಂಡು ಸಾರ್ವಜನಿಕರಿಗೆ ಉಪಯೋಗವಾಗಲಿ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಕಿರಣ್ ರೈ, ಸುಕೇಶ್ ಅಳಪೆ ಸೇರಿದಂತೆ ಪಕ್ಷದ ಪ್ರಮುಖರು, ವಾರ್ಡಿನ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.











