ಮಂಗಳೂರು, ಅ. 28 : ಈಶಿ ಪ್ರೊಡಕ್ಷನ್ ಲಾಂಛನದಲ್ಲಿ ಮನೋಹರ್ ರೈ ವೈಪಾಲ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯಾರಾದ “ಬನ” ತುಳುಚಲನ ಚಿತ್ರ ಅಕ್ಟೋಬರ್ 23 ರಂದು ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತಾಡಿದ ಅವರು, “ಬನ” ಸಿನಿಮಾ ಇಂದು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿದೆ ಈ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿ ಎಂದರು.
ಕಾರ್ಯಕ್ರಮದಲ್ಲಿ ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್.ಧನರಾಜ್ ಅವರು ಮಾತಾಡಿ, ನಿತಿನ್ ರೈ ಅವರು ಮೂರನೇ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಇಂದು ಮಂಗಳೂರಿನ ಭಾರತ್ ಸಿನಿಮಾಸ್ ಸುರತ್ಕಲ್, ಪಡುಬಿದ್ರೆ, ಉಡುಪಿ, ಮಣಿಪಾಲ, ಕಾರ್ಕಳ, ದೇರಳಕಟ್ಟೆ, ಪುತ್ತೂರು, ಸುಳ್ಯ, ಬೆಳ್ತಂಗಡಿ ಮೊದಲಾದ ಕಡೆಗಳಲ್ಲಿ ಬಿಡುಗಡೆಯಾಗಿದೆ ಎಂದು ಹೇಳಿದರು.
ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಅವರು ಮಾತಾಡಿ,ಬನ ಸಿನಿಮಾದಲ್ಲಿ ಸಮಾಜಕ್ಕೆ ಉತ್ತಮ ಸಂದೇಶದ ಜೊತೆಗೆ ಹಾಸ್ಯ, ಪ್ರೀತಿ, ಸಿಡುಕು, ಸೆಂಟಿಮೆಂಟ್ ಎಲ್ಲವೂ ಇದೆ ಎಂದರು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ರಾಜ್ಯ ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ನಟ ಸಾಯಿಕೃಷ್ಣ ಮಾತಾಡಿದರು.ಯಥಾಥ್೯ ಸೋಶಿಯಲ್ ಮಂಗಳೂರು ಇದರ ಅಧ್ಯಕ್ಷರಾದ ಈಶ್ವರ್ ಪ್ರಸಾದ್ ಶೆಟ್ಟಿ ಅವರು ಚಿತ್ರ ತಂಡಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಚಿತ್ರದಲ್ಲ್ಲಿ ಪತ್ರಕರ್ತ ಜಯಪ್ರಕಾಶ್ ಶೆಟ್ಟಿ,ರೂಪ ವರ್ಕಾಡಿ ಪ್ರಮುಖ ಪಾತ್ರಗಳಲ್ಲಿ ನಾಯಕನಾಗಿ ನಿಹಾಲ್ ರೈ, ನಾಯಕಿಯಾಗಿ ಕೃತಿ ಶ್ರೀನಿವಾಸ್ ಪೂಜಾರಿ, ಶರತ್ ಆಳ್ವ, ಪ್ರೀಯ ಶೆಟ್ಟಿ, ವಿಜಯಹರಿ ರೈ, ಭವ್ಯಶ್ರಿ ಪೂಜಾರಿ, ವಿಕಾಸ್ ಪುತ್ರನ್, ನಿಜರೂಪ ಶೆಟ್ಟಿ, ಸವಿತಾ ಅಂಚನ್ , ಧನ್ಯ ಪೂಜಾರಿ, ಪ್ರವೀಣ್ ಕೊಡಕ್ಕಲ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಅರುಣ್ ರೈ ಪುತ್ತೂರು ಛಾಯಾಗ್ರಹಣ ಮಾಡಿದ್ದು ನವೀನ್ ನೇರಳ್ತೊಡಿ ಅವರ ಸಂಕಲನ ಮಾಡಿದ್ದಾರೆ.ಜಯಕಾರ್ತಿ ಅವರು ಸಂಗೀತ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ನಿರ್ಮಾಪಕ ಮನೋಹರ ರೈ ವೈಪಾಲ, ಇಸ್ಮಾಯಿಲ್ ಮೂಡುಶೆಡ್ಡೆ, ವಿನೀತ್ ಕುಮಾರ್, ಸಮತಾ ಅಮೀನ್, ಪುರುಷೋತ್ತಮ್ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ ಉಪ್ಪಳ, ಬಾಳ ಜಗನ್ನಾಥ ಶೆಟ್ಟಿ, ಕುದ್ರೋಳಿ ಗಣೇಶ್, ನವೀನ್ ಶೆಟ್ಟಿ ಅಳಕೆ, ರಮೇಶ್ ರೈ ಕುಕ್ಕುವಳ್ಳಿ, ಸುಬ್ರಹ್ಮಣ್ಯ ಭಟ್, ರೂಪ ವರ್ಕಾಡಿ, ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಭಾಗ್ಯರಾಜ್ ಶೆಟ್ಟಿ ಹರೇಕಳ ಕಾರ್ಯಕ್ರಮ ನಿರ್ವಹಿಸಿದರು.











