ಸಾರಾಯೇವೋ, ಅ.30 : ಬೋಸ್ನಿಯಾ ಮತ್ತು ಹರ್ಜೆಗೋವಿನಾ ನಡುವೆ ಶಾಂತಿಪಾಲನಾ ಕಾರ್ಯಾಚರಣೆ ನಡೆಸುತ್ತಿದ್ದ ಇಟಾಲಿಯನ್ ಸೇನಾ ‘ಸಿಎಚ್-47 ಚಿನೂಕ್’ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್ನಲ್ಲಿದ್ದ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅ.29 ರಂದು ಬ್ರ್ಕೊ್ ಸಮೀಪದ ಗೊರೈಸ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ 11 ಮಂದಿಯ ಸಿಬ್ಬಂದಿ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬೆನ್ನಲ್ಲೇ ಬೋಸ್ನಿಯಾ ಮತ್ತು ಹರ್ಜೆಗೋವಿನಾದ ತುರ್ತು ಸೇವಾ ಸಿಬ್ಬಂದಿ ಹಾಗೂ ಯುರರ್ ನ ಸಿಬ್ಬಂದಿ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ರಕ್ಷಿಸಿ ಬ್ರ್ಕೊಬದಲ್ಲಿರುವ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ ಎಂದು ಯುರೋಪಿಯನ್ ಒಕ್ಕೂಟದ ಪಡೆ ತಿಳಿಸಿದೆ.
ಈ ಅಪಘಾತದಲ್ಲಿ ಯಾವುದೇ ನಾಗರಿಕರಿಗೆ ಗಾಯಗಳಾಗಿಲ್ಲ ಮತ್ತು ನಾಗರಿಕ ಮೂಲಸೌಕರ್ಯ, ಆಸ್ತಿಪಾಸ್ತಿ ಅಥವಾ ವಾಹನಗಳಿಗೆ ಯಾವುದೇ ಹಾನಿಯಾಗಿಲ್ಲ. ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.











