ಬೆಳ್ತಂಗಡಿ, ನ.04 : ಆಟೋರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನ.3ರಂದು ಸಂಜೆ ವೇಣೂರು ಸಮೀಪದ ಮೂಡುಕೋಡಿ ಪಂಜಲಬೈಲು ಎಂಬಲ್ಲಿ ನಡೆದಿದೆ.
ಮೃತರನ್ನು ಪೆರಾಡಿ ಗ್ರಾಮದ ನಿವಾಸಿ ಸ್ವಸ್ತಿಕ್ ಎಂದು ಗುರುತಿಸಲಾಗಿ ದೆ. ಸ್ವಸ್ತಿಕ್ ಅವರು ವೇಣೂರಿನ ಚಿನ್ನದ ಮಳಿಗೆಯೊಂದರಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.ಮಂಗಳವಾರ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಆಟೋರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











