ಮಂಗಳೂರು, ನ.16 : ಮ.ನ.ಪಾ ವ್ಯಾಪ್ತಿಯ 21ನೇ ಪದವು ಪಶ್ಚಿಮ ವಾರ್ಡಿನ ಯು. ಶ್ರೀನಿವಾಸ ಮಲ್ಯ ಬಡಾವಣೆಯಲ್ಲಿ ಸುಮಾರು 32 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಖಾ ಗಂಥಾಲಯ ಕಟ್ಟಡದ ಉದ್ಘಾಟನಾ ಸಮಾರಂಭವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯ ಜೊತೆಗೆ ಪುಸ್ತಕ ಓದುವ ಹವ್ಯಾಸವನ್ನೂ ಬೆಳೆಸಿಕೊಳ್ಳಬೇಕು. ಈ ಗ್ರಂಥಾಲಯವು ಮುಂದಿನ ಪೀಳಿಗೆಯ ಜ್ಞಾನಾರ್ಜನೆಗೆ ಮತ್ತು ಉತ್ತಮ ಭವಿಷ್ಯ ನಿರ್ಮಾಣಕ್ಕೆ ಪ್ರೇರಣೆಯ ಕೇಂದ್ರವಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಮನಪಾ ಸದಸ್ಯರುಗಳಾದ ವನಿತಾ ಪ್ರಸಾದ್, ಶಕೀಲಾ ಕಾವ, ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾದ ರಾಘವೇಂದ್ರ ಕೆ.ವಿ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.











