ಥೈಲ್ಯಾಂಡ್, ನ. 17 : ಥಾಯ್ಲೆಂಡ್ ನ ಪ್ರಸಿದ್ಧ ಪ್ರವಾಸಿ ದ್ವೀಪ ಫುಕೆಟ್ ನಲ್ಲಿರುವ ವಾಣಿಜ್ಯ ಕಟ್ಟಡವೊಂದರಲ್ಲಿ ಸೋಮವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ ಎಂದು ಥಾಯ್ ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಬೆಳಗಿನ ಜಾವ ಸುಮಾರು 3.17ರ ವೇಳೆಗೆ ವಾಹನ ಬಾಡಿಗೆ ವ್ಯವಹಾರ ನಡೆಸುತ್ತಿದ್ದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅಕ್ಕಪಕ್ಕದ ಹಲವು ಕಟ್ಟಡಗಳಿಗೂ ವ್ಯಾಪಿಸಿದೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಬೆಂಕಿ ಕೆನ್ನಾಲಿಗೆಗೆ 11 ಮಂದಿ ಸಾವನ್ನಪ್ಪಿದರೆ, 16 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಓರ್ವ ಮ್ಯಾನ್ಮರ್ ಪ್ರಜೆ ಸೇರಿ 15 ಮಂದಿ ಥಾಯ್ಲೆಂಡ್ ನ ಪ್ರಜೆಗಳು ಇದ್ದು, , ಒಬ್ಬರು ಮ್ಯಾನ್ಮಾರ್ ದೇಶದವರು ಎಂದು ಥಾಯ್ ಪೊಲೀಸರು ರಾಯಿಟರ್ಸ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆಯಲ್ಲಿ ಯಾವುದೇ ಪ್ರವಾಸಿಗರು ಮೃತಪಟ್ಟಿಲ್ಲ ಅಥವಾ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಪತ್ತೆಯಾಗಿಲ್ಲ. ಈ ಕುರಿತು ಅಧಿಕಾರಿಗಳು ತನಿಖೆಗೆ ನಡೆಯುತ್ತಿದೆ.











