ಮಂಗಳೂರು, ನ.24 : ನವದುರ್ಗ ಫಿಲ್ಮ್ಸ್ ಲಾಂಛನದಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ ನಿರ್ಮಾಣದಲ್ಲಿ ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ಪದ್ಮನಾಭ ಆ್ಯಂಡ್ ಫ್ಯಾಮಿಲಿ ಚಲನ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ನಡೆಯಿತು. ಅತಿಥಿಗಳು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಟೀಸರ್ ಮತ್ತು ಸಿನಿಮಾದ ಹಾಡಿನ ಪ್ರದರ್ಶನ ನಡೆಯಿತು.
ಬಳಿಕ ಮಾತನಾಡಿದ ನಿರ್ಮಾಣ ಮೇಲ್ವಿಚಾರಕಿ ಹಾಗೂ ಅಭಿಮತ ಟಿವಿಯ ಮುಖ್ಯಸ್ಥೆ ಡಾ ಮಮತಾ ಪಿ ಶೆಟ್ಟಿ ಅವರು, ಇಸ್ಮಾಯಿಲ್ ಮೂಡುಶೆಡ್ಡೆ ಅವರು ನಿರ್ಮಾಪಕರಿಗೆ ಕಥೆ ಹೇಳಿದರು. ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿ ದ್ದಾರೆ. ಪದ್ಮನಾಭ ಆ್ಯಂಡ್ ಫ್ಯಾಮಿಲಿ ಈ ಸಿನಿಮಾದ ಚಿತ್ರಿಕರಣ 54 ದಿನಗಳ ಕಾಲ ನಡೆದಿದೆ. ಸಿನಿಮಾ ಚಿತ್ರೀಕರಣದ ವೇಳೆ ಬಹಳಷ್ಟು ಮಂದಿ ತೆರೆಯ ಹಿಂದೆ ಕೆಲಸ ಮಾಡಿದ್ದಾರೆ. ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ ಅವರು ಸತತ ನಾಲ್ಕು ವರ್ಷಗಳಿಂದ ನಿರ್ಮಾಪಕರಿಗಾಗಿ ಕಾದು ಕುಳಿತಿದ್ದರು. ಇವಾಗ ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ ಅವರು ಬಂಡವಾಳ ಹೂಡಿ ದ್ದಾರೆ ಎಂದು ತಿಳಿಸಿದರು.
ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ ಮಾತನಾಡಿ ಈವರೆಗೆ ನಾಲ್ಕು ಸಿನಿಮಾ ಮಾಡಿದ್ದೇನೆ. ಪದ್ಮನಾಭ ಆ್ಯಂಡ್ ಫ್ಯಾ ಕಥೆಯನ್ನು ಸಿನಿಮಾ ಮಾಡಲು ಪ್ರಯತ್ನಿಸಿದಾಗ ಡಾ ಕನ್ಯಾನ ಸದಾಶಿವ ಶೆಟ್ಟಿಯವರ ಪರಿಚಯ ಆಯಿತು. ಅವರಿಗೆ ಕಥೆ ಇಷ್ಟ ಆಯಿತು. ಸಿನಿಮಾನೂ ಆಯಿತು. ಜನವರಿ 15 ಕ್ಕೆ ಸಿನಿಮಾ ತೆರೆಗೆ ಬರಲಿದೆ. ಸಿನಿಮಾಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ ಎಂದರು.
ಸಿನಿಮಾಕ್ಕೆ ಎ ಕೆ ಕಾರ್ಲ ಸಂಪೂರ್ಣ ಸಹಕಾರ ನೀಡಿದ್ದಾರೆ. ಸಿನಿಮಾದಲ್ಲಿ ನಾಲ್ಕು ಹಾಡುಗಳಿವೆ.ಹಾಡಿನ ಚಿತ್ರೀಕರಣಕ್ಕಾಗಿ ಒಂದು ಕೋಟಿ ಖರ್ಚು ಮಾಡಲಾಗಿದೆ. ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಪದ್ಮನಾಭ ಆ್ಯಂಡ್ ಫ್ಯಾಮಿಲಿ ಜನವರಿ 15 ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ ಮತ್ತು ಕಾಸರಗೋಡು ಜಿಲ್ಲೆಯಲ್ಲೂ ತೆರೆಕಾಣಲಿದೆ ಎಂದು ತಿಳಿಸಿದರು.
ಪಣಂಬೂರು ಠಾಣಾ ಇನ್ಸ್ ಪೆಕ್ಟರ್ ಸಲೀಮ್ ಅಬ್ಬಾಸ್ ವಲಾಲ್ ಮಾತನಾಡಿ ಸಿನಿಮಾದ ಟೀಸರ್ ನ ಗುಣಮಟ್ಟ ಚೆನ್ನಾಗಿದೆ. ಎಂದರು.
ಮುಖ್ಯ ಅತಿಥಿ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ಟೀಸರ್ ಚೆನ್ನಾಗಿದೆ. ಹಾಡೂ ಚೆನ್ನಾಗಿತ್ತು. ಇಸ್ಮಾಯಿಲ್ ಕನ್ನಡದಲ್ಲಿ ನಿರ್ದೇಶಿಸುತ್ತಿರುವ ಎರಡನೆ ಸಿನಿಮಾ ಕೂಡಾ ಜನರ ಮನಗೆಲ್ಲಲಿ ಎಂದು ತಿಳಿಸಿದರು.ಮುಖ್ಯ ಅತಿಥಿ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ಟೀಸರ್ ಚೆನ್ನಾಗಿದೆ ಎಂದರು.
ಸಮಾರಂಭದಲ್ಲಿ ನ್ಯಾಯವಾದಿ ಅರುಣ್ ಬಂಗೇರ, ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ಅಡ್ಯಾರ್ ಮಾಧವ ನಾಯ್ಕ್, ತಮ್ಮ ಲಕ್ಷ್ಮಣ್, ಸತೀಶ್ ಬಂದಲೆ, ಪಮ್ಮಿ ಕೊಡಿಯಾಲ್ ಬೈಲ್, ಡಾ ಅಬೂಬಕರ್ ಸಿದ್ದಿಕ್ ಅಡ್ಡೂರು, ಡಾ ಕಿರಣ್ ಕುಮಾರ್, ಎನ್ ನಾಗರಾಜ್, ಶರಣ್ ರಾಜ್ ಕಾಸರಗೋಡು, ನಿತಿನ್ ರೈ ಕುಕ್ಕುವಳ್ಳಿ, ಪತ್ರಕರ್ತರಾದ ಶ್ರೀನಿವಾಸ್ ನಾಯಕ್ ಇಂದಾಜೆ, ಬಾಳ ಜಗನ್ನಾಥ ಶೆಟ್ಟಿ, ಶಮೀರ್ ಮುಡಿಪು ಎಕೆ ಕಾರ್ಲ ಮೊದಲಾದವರು ಉಪಸ್ಥಿತರಿದ್ದರು.ಷಷ್ಠೀಶ್ ಪಿ ಶೆಟ್ಟಿ ಸ್ವಾಗತಿಸಿದರು. ವಿಜೆ ವಿಖ್ಯಾತ್ ಕಾರ್ಯಕ್ರಮ ನಿರೂಪಿಸಿದರು.
ತಾರಾಗಣದಲ್ಲಿ ದೀಪಕ್ ರೈ ಪಾಣಾಜೆ, ಬಿಗ್ ಬಾಸ್ ಖ್ಯಾತಿಯ ಸಂಗೀತ ಶೃಂಗೇರಿ, ಹೃದನ್ ಶೆಟ್ಟಿ, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ರವಿರಾಮಕುಂಜ, ಪುಷ್ಪರಾಜ ಬೊಳ್ಳಾರ್, ಪ್ರಸನ್ನ ಶೆಟ್ಟಿ ಬೈಲೂರು, ಮೈಮ್ ರಾಮ್ ದಾಸ್, ಉಮೇಶ್ ಮಿಜಾರ್, ಅನಿಲ್ ರಾಜ್ ಉಪ್ಪಳ, ಮಾನಸಿ ಸುಧೀರ್, ಸಾಯಿಕೃಷ್ಣ, ಸತೀಶ್ ಬಂದಲೆ ಅಭಿನಯಿಸಿದ್ದಾರೆ. ಮಣಿಕಾಂತ್ ಕದ್ರಿ ಮತ್ತು ಸಮೀರ್ ಮುಡಿಪು ಸಂಗೀತ ನೀಡಿದ್ದಾರೆ.









