ಬೆಂಗಳೂರು : ನಿನ್ನೆ ಸಂಜೆ ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರಾನ್ ಸೋಂಕು (Omicron Variant) ದೃಡಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸೋಂಕಿತರ ಸಂಪರ್ಕಿತರ ಪತ್ತೆಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆ ಸಂಜೆ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸೋಂಕಿತರ ಸಂಪರ್ಕಿತರ ಪತ್ತೆಗೆ ಸೂಚನೆ ನೀಡಿದ್ದೇನೆ.
ಮುಂದಿನ ದಿನಗಳಲ್ಲಿ ಒಮಿಕ್ರಾನ್ ವೈರಸ್ ಹೇಗೆ ನಿಭಾಯಿಸಬೇಕೆಂದು ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಸಭೆಯ ಬಳಿಕ ಮಾರ್ಗಸೂಚಿ ಸಿದ್ದಪಡಿಸುತ್ತೇವೆ. ಬೇರೆ ಬೇರೆ ದೇಶಗಳಲ್ಲಿ ಪ್ರೋಟೋಕಾಲ್ ಹೇಗೆ ಎಲ್ಲದರ ಬಗ್ಗೆ ಅಧ್ಯಯನ ನಡೆಸಿ ಒಮಿಕ್ರಾನ್ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.