ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜ.17,ಸೋಮವಾರ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆ ನಡೆದಿತ್ತು. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳು ದ.ಕ.ಜಿಲ್ಲೆಯಲ್ಲಿ 5 ಕ್ಕಿಂತ ಹೆಚ್ಚು ಕೊರೊನಾ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ದ. ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ
ಈಗಿರುವ ಸ್ಥಿತಿಯಲ್ಲಿ ದ.ಕ.ಜಿಲ್ಲೆಯಲ್ಲಿ ಪೂರ್ತಿಯಾಗಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ ತೊಂದರೆಯಾಗಲಿದೆ. ಈ ಕಾರಣದಿಂದ ಯಾವ ಶಾಲೆಗಳಲ್ಲಿ ಹೆಚ್ಚುಕೋವಿಡ್ ಪಾಸಿಟಿವ್ ಸಂಖ್ಯೆ ಕಂಡು ಬಂದಿದೆಯೋ ಆ ಶಾಲೆಗಳನ್ನು ಮಾತ್ರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬಹುದು ಎಂದು ಅಧಿಕಾರಿಗಳು, ಆಡಳಿತ ಮಂಡಳಿಯಿಂದ ಅಭಿಪ್ರಾಯ ವ್ಯಕ್ತವಾಯಿತು.
ದ.ಕ.ಜಿಲ್ಲೆಯ ಶಾಲೆಗಳಿಂದ ದಿನನಿತ್ಯ ಕೊರೊನಾ ಪ್ರಕರಣ ಬಗ್ಗೆ ಮಾಹಿತಿ ಪಡೆದು, ಅದಕ್ಕನುಗುಣವಾಗಿ ಶಿಕ್ಷಣ ಇಲಾಖೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಒಂದು ವಾರದ ನಂತರ ಮತ್ತೊಂದು ಸುತ್ತಿನಲ್ಲಿ ಶಾಲಾ ಆಡಳಿತ ಮಂಡಳಿ, ಅಧಿಕಾರಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿಯವರು ತಿಳಿಸಿದರು.
4 Comments
peaceful piano music
Pingback: kojic acid serum
Pingback: buy drivers license online
Pingback: ดูดวงไพ่ยิปซี