ಉಡುಪಿ: ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಜ.15, ಶನಿವಾರ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋವಿಡ್ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಅನಿವಾರ್ಯ ಸಂದರ್ಭಗಳಲ್ಲಿ, ನೀವು ನನಗೆ ಕರೆ ಮಾಡಬಹುದಾಗಿದೆ. ಕಳೆದ ಎರಡು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡುತ್ತೇನೆ’ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.