ಬೆಂಗಳೂರು: ಯಶ್ ಅಭಿನಯದ ‘ಕಿರಾತಕ’ ಚಿತ್ರವನ್ನು ನಿರ್ದೇಶಿಸಿದ್ದ ಪ್ರದೀಪ್ ರಾಜ್(46) ಜ.20ರಂದು ನಿಧನರಾಗಿದ್ದಾರೆ.
ಡಯಾಬಿಟಿಸ್ ನಿಂದ ಹಲವು ವರ್ಷಗಳಿಂದ ಬಳಲುತ್ತಿದ್ದ ಪ್ರದೀಪ್ ರಾಜ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಅವರು ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಈ ಕುರಿತು ಪ್ರದೀಪ್ ರಾಜ್ ಸಹೋದರ ಪ್ರಶಾಂತ್ ಮಾಹಿತಿ ನೀಡಿದ್ದಾರೆ.
ಯಶ್ ಅಭಿನಯದ ಕಿರಾತಕ , ಸತೀಶ್ ಅಭಿನಯದ ಅಂಜದ ಗಂಡು, ಮಿಸ್ಟರ್ 420, ಬೆಂಗಳೂರು 23 ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. ಪ್ರದೀಪ್ ರಾಜ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ