ಉಡುಪಿ: ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ
ಜಿಲ್ಲೆಯಲ್ಲಿ ಮಾರ್ಚ್ 21ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ 5ಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಶಾಲಾ-ಕಾಲೇಜು ಆವರಣದಲ್ಲಿ ಪೂರ್ನಾನುಮತಿ ಇಲ್ಲದೇ ಪ್ರವೇಶ ನಿರ್ಬಂಧಿಸಲಾಗಿದೆ.
ಹಾಗೇನೆ ಮುಖ್ಯಸ್ಥರ ಪೂರ್ನಾನುಮತಿ ಇಲ್ಲದೇ ಅಪರಿಚಿತ ವ್ಯಕ್ತಿಗಳು ಶಿಕ್ಷಣ ಸಂಸ್ಥೆಯನ್ನು ಪ್ರವೇಶ ಮಾಡುವುದನ್ನು ಕೂಡ ನಿರ್ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.