ಉಡುಪಿ : ಖಾಸಗಿ ಬಸ್ ನಿರ್ವಾಹಕರು ಟೈಮಿಂಗ್ ವಿಷಯದಲ್ಲಿ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್‌ಗಳ ಕಂಡಕ್ಟರ್‌ಗಳು ಟೈಮಿಂಗ್ ವಿಚಾರವಾಗಿ ಮಾತಿಗೆ ಮಾತು ಬೆಳೆದು ಸಿಟಿ ಬಸ್ ನಿಲ್ದಾಣದಲ್ಲೇ ಹೊಡೆದಾಡಿಕೊಂಡಿದ್ದಾರೆ. ಈ ಹೊಡೆದಾಟ ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.