ಬೆಂಗಳೂರು : ರಾಜ್ಯದಲ್ಲಿ ಹೆಚ್ಚುವರಿ 1,000 ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ಜೂನ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಹೆಚ್ಚುವರಿ 1,000 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಹಾಗೂ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಉತ್ತೇಜಿಸಲು ವಿಶೇಷ ಡ್ರೈವ್ ನಡೆಸಲಾಗುವುದು ಎಂದರು.
ಇವಿ ಚಾರ್ಜಿಂಗ್ ಕೇಂದ್ರಗಳನ್ನು ರಾಜ್ಯದ ಪ್ರವಾಸಿ ಸ್ಥಳಗಳಲ್ಲಿ,ಜಿಲ್ಲಾ ಕೇಂದ್ರಗಳಲ್ಲಿ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.