ಬೆಂಗಳೂರು: ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರಕಾರ ಸೋಮವಾರದಂದು ಬೆಂಗಳೂರಿನ ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಅದರಂತೆ ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗಗಕ್ಕೆ ವರ್ಗಾಯಿಸಲಾಗಿದೆ. ಇದೀಗ ಅವರ ಸ್ಥಾನಕ್ಕೆ ನೂತನ ಆಯುಕ್ತರಾಗಿ ಪ್ರತಾಪ್ ರೆಡ್ದಿಯವರನ್ನು ನೇಮಕ ಮಾಡಲಾಗಿದೆ.