ನವದೆಹಲಿ: ದೇಶಾದ್ಯಂತ ಜೂನ್ ತಿಂಗಳಿಂದ ಕೋವಿಡ್ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ.
ಜೂನ್ ನಿಂದ ಎರಡು ತಿಂಗಳ ಅವಧಿಯಲ್ಲಿ ಪ್ರತಿ ಮನೆಗೂ ಲಸಿಕೆ ಅಭಿಯಾನವನ್ನು ನಡಸಬೇ ಕು. ಕೋವಿಡ್ ಪ್ರಕರಣಗಳ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಇನ್ನೂ ಲಸಿಕೆ ಪಡೆದುಕೊಳ್ಳದೇ ಇರುವವರಿಗೆ ಲಸಿಕೆ ನೀಡುವ ಜವಾಬ್ದಾರಿಯನ್ನು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಮುಂದುವರಿಸಬೇಕು ಎಂದು ತಿಳಿಸಲಾಗಿದೆ.