ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದು, ಈ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿಗಳ ಸ್ಮರಣಾರ್ಥ ಕೂಳೂರಿನ ತಣ್ಣೀರು ಬಾವಿಯ ಬಳಿಯಿರುವ ಪಾರ್ಕ್ ನಲ್ಲಿ ನಿರ್ಮಿಸಲಾಗಿರುವ ಸ್ಮಾರಕಕ್ಕೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಇಂದು ಮೇ.22ರ ಭಾನುವಾರ ಸಂಸದರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ಸ್ಮಾರಕಕ್ಕೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.,ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ, ಮಂಗಳೂರು ತಹಶೀಲ್ದಾರ್ ಪುರಂದರ್ ಹಾಗೂ ಇತರೆ ಗಣ್ಯರು ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.