ತಮಿಳುನಾಡು : ತಮಿಳಿನ ಖ್ಯಾತ ನಟ ವಿಜಯ್ ಅವರ ಪಣೈಯೂರುನ ಇಸಿಆರ್ ರಸ್ತೆಯಲ್ಲಿರುವ ಕಚೇರಿಯ ಆವರಣದಲ್ಲಿ ಶನಿವಾರ ಜೂ. 18ರಂದು ಬೆಳಿಗ್ಗೆ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಪ್ರಭಾಕರ್ ಎಂದು ಗುರುತಿಸಲಾಗಿದ್ದು, ಪ್ರಭಾಕರ್, ಅದೇ ಕಚೇರಿಯಲ್ಲಿ ಕೆಲ ತಿಂಗಳಿಂದ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕೆಲವು ದಿನಗಳ ಹಿಂದಷ್ಟೆ ತನ್ನ ಊರಿಗೆ ಹೋಗಿ ಕುಟುಂಬವನ್ನು ಭೇಟಿ ಮಾಡಿಕೊಂಡು ಬಂದಿದ್ದ ಎನ್ನಲಾಗಿದೆ.
ಅತಿಯಾಗಿ ಕುಡಿದ ಹಿನ್ನೆಲೆಯಲ್ಲಿ ಗಟ್ಟಿಯಾದ ಪದಾರ್ಥ ತಿಂದು ಉಸಿರಾಡಲು ಕಷ್ಟವಾಗಿ ಮೃತಪಟ್ಟಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.