ತಿರುವನಂತಪುರ : ಖಳನಾಯಕ ಪಾತ್ರದ ಮೂಲಕ ಹೆಸರುವಾಸಿಯಾದ ಮಲಯಾಳಂ ನಟ ಎನ್ ಡಿ ಪ್ರಸಾದ್ (43) ಕೊಚ್ಚಿ ಬಳಿಯ ಕಲಮಸ್ಸೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಜೂ 25,ಶನಿವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಪ್ರಸಾದ್ ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಪ್ರಸಾದ್ ಅವರು ಹಲವಾರು ಚಲನಚಿತ್ರದಲ್ಲಿ ನಟಿಸಿದ್ದಾರೆ. ಆದರೆ ಆ್ಯಕ್ಷನ್ ಹೀರೋ ಬಿಜು ಚಿತ್ರದಲ್ಲಿನ ಅವರ ಅಭಿನಯ ಅವರಿಗೆ ಪ್ರಸಿದ್ಧಿಯನ್ನು ತಂದುಕೊಟ್ಟಿತ್ತು ಡ್ರಗ್ಸ್ ಪ್ರಕರಣ ಸೇರಿದಂತೆ ಅವರ ಮೇಲೆ ಹಲವು ಪೊಲೀಸ್ ಪ್ರಕರಣಗಳು ದಾಖಲಾಗಿದ್ದವು.