ಉತ್ತರಾಖಂಡ : ಉತ್ತರಾಖಂಡ್ ರಾಜ್ಯದ ನೈನಿತಾಲ್ ಜಿಲ್ಲೆಯ ರಾಮನಗರ ಎಂಬಲ್ಲಿ ಕಾರೊಂದು ನದಿಗೆ ಬಿದ್ದ ಪರಿಣಾಮ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಈ ಘಟನೆಯಲ್ಲಿ ಸಾವನ್ನಪ್ಪಿದವರೆಲ್ಲರೂ ಪಂಜಾಬ್ ಮೂಲದವರು ಎನ್ನಲಾಗಿದೆ ಕಾರಿನಲ್ಲಿ ಒಟ್ಟು 11 ಜನರಿದ್ದು, ಇಬ್ಬರನ್ನು ರಕ್ಷಿಸಲಾಗಿದ್ದು, ಉಳಿದ ಒಂಬತ್ತು ಮಂದಿ ಅಸುನೀಗಿದ್ದಾರೆ ಎಂದು ಸ್ಥಳೀಯಾಡಳಿತ ದೃಢಪಡಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಮತ್ತು ಅಗ್ನಿಶಾಮಕ ತಂಡವು ಧಾವಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ.