ಹೆಬ್ರಿ: ಕಳೆದ ಕೆಲವು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯದಲ್ಲಿ ಭೂಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದಿದೆ, ಇದರಿಂದಾಗಿ ಸಂಚಾರ ಸ್ಥಗಿತವಾಗಿದೆ.
ತಡರಾತ್ರಿ ಭೂಕುಸಿತ ಸಂಭವಿಸಿದ್ದು, ರಾತ್ರಿಯಿಂದಲೇ ವಾಹನ ಸಂಚಾರ ಬಂದ್ ಆಗಿದ್ದು, ಶಿವಮೊಗ್ಗ ಆಗುಂಬೆಯಿಂದ ಉಡುಪಿಗೆ ಬರುವ ವಾಹನಗಳು ಸಿದ್ಧಾಪುರ ಮೂಲಕ ಸಂಚರಿಸುತ್ತಿವೆ.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.