ಕುಂದಾಪುರ : ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಬೈಂದೂರು ಸಮೀಪದ ಕಂಬದಕೋಣೆ ಸೇತುವೆ ಬಳಿ ಸಂಭವಿಸಿದೆ.
ಮೃತ ವಿದ್ಯಾರ್ಥಿಗಳು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಆದಿತ್ಯ ರೆಡ್ಡಿ (18), ಹಾಗೂ ತರುಣ್ ಕುಮಾರ್ ರೆಡ್ಡಿ (19) ಎಂದು ಗುರುತಿಸಲಾಗಿದೆ.
ರವಿವಾರದಂದು ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ. ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.