ಮುಂಬೈ : ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಮೇರಿಕಾದ ಡಾಲರ್ ಎದುರು ರೂಪಾಯಿ ಮೌಲ್ಯ ಭಾರೀ ಕುಸಿತ ಕಂಡಿದ್ದು ಫಾರೆಕ್ಸ್ ಮಾರುಕಟ್ಟೆಯಲ್ಲಿ ರೂಪಾಯಿ ವಿನಿಮಯ ದರ ರೂ80.04 ತಲುಪಿದೆ.
ಇನ್ನು ರೂಪಾಯಿ ದುರ್ಬಲವಾದರೆ ಆಮದು ಹೊರೆಯಾಗಲಿದ್ದು, ನಾವು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳಿಗೆ ಡಾಲರ್ನಲ್ಲಿ ಪಾವತಿಸಿದರೆ, ನಾವು ಹೆಚ್ಚುವರಿ ಹಣವನ್ನು ಪಾವತಿಸಬೇಕಾಗುತ್ತದೆ.
ಇನ್ನು ತೈಲ ದರ ಏರಿಕೆ ಮತ್ತು ನಿರಂತರ ಹಣದುಬ್ಬರದ ಪರಿಣಾಮ ಭಾರತೀಯ ಷೇರುಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.