ಕಡಬ : ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಡಬ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಡೆದಿದೆ.
ಕುಟ್ರುಪಾಡಿ ಗ್ರಾಮ ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಆ.15,2022 ರಂದು ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮದ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಜಿ ಯೋಧ ಗಂಗಾಧರ ಗೌಡ ಎಂದು ಹೇಳಲಾಗಿದೆ