ನವದೆಹಲಿ:76ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಆ.15 ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದ ದೇಶವಾಸಿಗಳಿಗೆ ಶುಭಾಶಯಗಳು. ಸ್ವಾತಂತ್ರ್ಯದ ಈ ಅಮೃತ ಮಹೋತ್ಸವಕ್ಕಾಗಿ ನಾನು ವಿಶ್ವದಾದ್ಯಂತ ಹರಡಿರುವ ಭಾರತದ ಪ್ರೇಮಿಗಳನ್ನು, ಭಾರತೀಯರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
ಮಂಗಲ್ ಪಾಂಡೆ, ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಜವಹಾರ್ ಲಾಲ್ ನೆಹರೂ, ಬಾಬಾ ಸಾಹೇಬ್ ಅಂಬೇಡ್ಕರ್, ವೀರ ಸಾವರ್ಕರ್ ಸೇರಿದಂತೆ ಹಲವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಅವರಿಗೆ ಕೃತಜ್ಞರಾಗಿದ್ದೇವೆ. ಹೋರಾಟಗಾರರು ತಮ್ಮ ಸರ್ವಸ್ವವನ್ನೂ ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.