ಮಂಗಳೂರು : 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.15, ಸೋಮವಾರ ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿ ರಾಷ್ಟ್ರ ಪ್ರೇಮ ಮತ್ತು ದೇಶ ಪ್ರೇಮವನ್ನು ಪ್ರತಿಯೊಬ್ಬ ಭಾರತೀಯರಲ್ಲಿ ಬಿತ್ತಲು ಮತ್ತು ಬೆಳೆಸಲು ಇದೇ ಅಗಸ್ಟ್-13 ರಿಂದ ಪ್ರತಿಯೊಂದು ಮನೆಯ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಲು ಹರ್ ಘರ್ ತಿರಾಂಗ ಅಭಿಯಾನ ಪ್ರಯುಕ್ತ ದ. ಕ. ಜಿಲ್ಲೆಯಲ್ಲಿ ಒಟ್ಟು 5 ಲಕ್ಷಕ್ಕೂ ಹೆಚ್ಚು ರಾಷ್ಟ್ರ ಧ್ವಜಗಳನ್ನು ಮನೆಗಳಲ್ಲಿ, ಅಂಗಡಿಗಳಲ್ಲಿ, ಸರ್ಕಾರಿ ಕಟ್ಟಡಗಳಲ್ಲಿ ಇನ್ನಿತರ ಕಟ್ಟಡಗಳಲ್ಲಿ ಹಾರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ,ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತಿತ್ತರು ಉಪಸ್ಥಿತರಿದ್ದರು.