ಮಂಗಳೂರು: ಹಿಂದೂ ಯುವ ಸೇನೆಯ ಸಕ್ರಿಯ ಕಾರ್ಯಕರ್ತರಾಗಿದ್ದ ಜಯಂತ್ ಎಸ್.ಕುಂಪಲ (49) ಅವರು ಕುಂಪಲದ ಕೃಷ್ಣನಗರದಲ್ಲಿನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.3ರ ಶನಿವಾರ ನಡೆದಿದೆ.
ಜಯಂತ್ ಅವರು ಆಟೊರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದರು. ಕುಂಪಲದ ಹನುಮಾನ್ ನಗರದಲ್ಲಿ ಹೊಸ ಮನೆ ನಿರ್ಮಿಸುತ್ತಿದ್ದರು. ಸೆ..2ರಂದು ಜಯಂತ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಅವರ ಮೊಬೈಲ್ ಫೋನ್ ನ್ನು ಕಳೆದುಕೊಂಡಿದ್ದರು.ಈ ಬಗ್ಗೆ ಶನಿವಾರ ಮಧ್ಯಾಹ್ನದವರೆಗೂ ತಮ್ಮ ಸ್ನೇಹಿತರಲ್ಲಿ ಹೇಳಿಕೊ೦ಡಿದ್ದರು ಎನ್ನಲಾಗಿದೆ.
ಪತ್ನಿ ಮನೆಗೆ ಮರಳಿದಾಗ ಜಯಂತ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.