ಉಡುಪಿ : ಮಲ್ಪೆ ಬಂದರಿನ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಹನುಮ ನಿಧಿ ಕಣ್ಣಿ ಪಾರ್ಟಿಯಲ್ಲಿ ದುಡಿಯುತ್ತಿದ್ದ ಪುರಂದರ ಎಂದು ಗುರುತಿಸಲಾಗಿದೆ. ಪುರಂದರ ಅವರು ರವಿವಾರ ರಾತ್ರಿ 10:45 ರ ಸುಮಾರಿಗೆ ಬೋಟ್ ನಿಂದ ಮೀನು ಖಾಲಿ ಮಾಡುವ ಸಂದರ್ಭ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ತೊಟ್ಟಂ ಮೂಲದವರಾಗಿದ್ದ ಪುರಂದರ ಅವರು ಕಳೆದ ಸುಮಾರು 10 ವರ್ಷಗಳಿಂದ ಕಣ್ಣಿ ಪಾರ್ಟಿ ಯಲ್ಲಿ ಕೆಲಸ ಮಾಡುತಿದ್ದರು ಎನ್ನಲಾಗಿದೆ.