ಬೆಂಗಳೂರು : ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ(61) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಗಳವಾರ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್ ಕತ್ತಿ ನಿಧನರಾಗಿದ್ದಾರೆ.
ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಅಭಿವೃದ್ದಿಗೆ ಕತ್ತಿಯವರ ಕೊಡುಗೆ ಸ್ಮರಣೀಯ ಎಂದು ತಿಳಿಸಿದ್ದಾರೆ.