ಮುಂಬೈ : ಚಿರತೆ ದಾಳಿಗೆ ಒಂದೂವರೆ ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಅ. 24, ಸೋಮವಾರ ಮುಂಬೈನ ಪಶ್ಚಿಮ ಉಪನಗರವಾದ ಗೋರೆಗಾಂವ್ನ ಆರೆ ಕಾಲೋನಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಬಾಲಕಿಯು ತನ್ನ ತಾಯಿಯೊಂದಿಗೆ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಚಿರತೆಯೊಂದು ಏಕಾಏಕಿ ಬಾಲಕಿಯ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದು, ಗಾಯಗೊಂಡ ಬಾಲಕಿಯನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ.
ಪ್ರಾಥಮಿಕ ಮಾಹಿತಿ ಆಧಾರಿಸಿ ಪ್ರಕರಣದಲ್ಲಿ ಆಕಸ್ಮಿಕ ಸಾವು ವರದಿ ದಾಖಲಿಸಿದ್ದೇವೆ, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.