ಕೋಟ, ಡಿ. 31: ಕತಾರ್ ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್ (45) ಅವರು 29, ಗುರುವಾರ ಮಿದುಳು ನಿಷ್ಕ್ರಿಯಗೊಂಡು ಸಾವನಪ್ಪಿದ್ದಾರೆ.
ಮೃತರು 4 ದಿನಗಳ ಹಿಂದೆ ಕತಾರ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು, ಮಿದುಳು ನಿಷ್ಕ್ರಿಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ. ಮೃತರು ತಾಯಿ, ಪತ್ನಿಯನ್ನು ಅಗಲಿದ್ದಾರೆ.